ಮನೆ ರಾಷ್ಟ್ರೀಯ ಹಿಂದಿನ ಸರ್ಕಾರಗಳು ನೀಡಿದ್ದಕ್ಕಿಂತ 1.5 ಪಟ್ಟು ಹೆಚ್ಚು ಉದ್ಯೋಗಗಳನ್ನು ನೀಡಿದ್ದೇವೆ: ಪ್ರಧಾನಿ ಮೋದಿ

ಹಿಂದಿನ ಸರ್ಕಾರಗಳು ನೀಡಿದ್ದಕ್ಕಿಂತ 1.5 ಪಟ್ಟು ಹೆಚ್ಚು ಉದ್ಯೋಗಗಳನ್ನು ನೀಡಿದ್ದೇವೆ: ಪ್ರಧಾನಿ ಮೋದಿ

0

ನವದೆಹಲಿ: ಹಿಂದಿನ ಸರ್ಕಾರಗಳು 10 ವರ್ಷಗಳಲ್ಲಿ ನೀಡಿದ್ದ ಉದ್ಯೋಗಕ್ಕಿಂತ ಅಷ್ಟೇ ಅವಧಿಯ ನಮ್ಮ ಆಡಳಿತದಲ್ಲಿ 1.5 ಪಟ್ಟು ಹೆಚ್ಚು ಉದ್ಯೋಗಗಳನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರೋಜಗಾರ್ ಮೇಳದ(ಉದ್ಯೋಗ ಮೇಳ) ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಒಂದು ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರ ಉದ್ಯೋಗ ನೇಮಕಾತಿಯಲ್ಲಿ ಪಾರದರ್ಶಕತೆ ತಂದಿದೆ. ಕಾಲಮಿತೊಯಲ್ಲಿ ಉದ್ಯೋಗಕ್ಕೆ ನೇಮಕಾತಿ ಖಚಿತಪಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದರು.

ತಮ್ಮೆಲ್ಲರಿಗೂ ಸಮಾನ ಅವಕಾಶ ಸಿಗುತ್ತಿದೆ ಎಂದು ಯುವಕರು ಈಗ ಅರಿತುಕೊಂಡಿದ್ದಾರೆ. ತಮ್ಮ ಪ್ರತಿಭೆ ಮತ್ತು ಪರಿಶ್ರಮದ ಮೂಲಕ ಸರ್ಕಾರಿ ‌ಉದ್ಯೋಗ ಪಡೆದುಕೊಳ್ಳಬಹುದು ಎಂಬ ನಂಬಿಕೆ ಬಂದಿದೆ ಎಂದು ಅವರು ಹೇಳಿದ್ದಾರೆ.

ಒಂದು ಕೋಟಿ ಮನೆಗಳ ಛಾವಣಿಗಳಲ್ಲಿ ಸೋಲಾರ್ ಪ್ಯಾನಲ್ ಅಳವಡಿಕೆ, ಮೂಲಸೌಕರ್ಯ ವಲಯಕ್ಕೆ ಮಾಡಿರುವ ಅಪಾರ ಹೂಡಿಕೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಿವೆ ಎಂದು ಮೋದಿ ಹೇಳಿದ್ದಾರೆ.

1.25 ಸ್ಟಾರ್ಟಪ್‌ ಗಳ ಮೂಲಕ ಭಾರತವು ಸ್ಟಾರ್ಟಪ್ ಕ್ಷೇತ್ರದಲ್ಲಿ ವಿಶ್ವದಲ್ಲಿ ಮೂರನೇ ದೊಡ್ಡ ದೇಶವಾಗಿದೆ. ಯುವಕರು ಚಿಕ್ಕ ನಗರಗಳಲ್ಲಿ ತಮ್ಮದೇ ಸಂಸ್ಥೆ ಸ್ಥಾಪಿಸುತ್ತಿದ್ದಾರೆ. ಅವುಗಳು ಲಕ್ಷಾಂತರ ಉದ್ಯೋಗ ಸೃಷ್ಟಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ಸ್ಟಾರ್ಟಪ್‌ ಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಸಂಶೋಧನೆ ಹಾಗೂ ನಾವೀನ್ಯತೆ ವಲಯಕ್ಕೆ ₹1 ಲಕ್ಷ ಕೋಟಿ ನೀಡಲಾಗಿದೆ ಎಂದು ಪ್ರಧಾನಿ ಹೇಳಿದರು.