ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಚಕ್ರ ಹರಿದು ಬೈಕ್ ಸವಾರರೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.
ನೆಲಮಂಗಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಂದ್ರ (೫೦) ನಾಗಸಂದ್ರ ನಿವಾಸಿಯಾಗಿದ್ದ ಮೃತರು.
ಕೆಲಸದ ನಿಮಿತ್ತ ಬೆಳಿಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಜಿಎಸ್ ಟಿ ಕಚೇರಿಗೆ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ ಅವರ ಬಲಬದಿ ಬಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಕೆಳಕ್ಕೆ ಬಿದ್ದಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಯಶವಂತಪುರ ಸಂಚಾರಿ ಠಾಣಾ ಪೊಲೀಸರು ಬಸ್ ಚಾಲಕನನ್ನ ವಶಕ್ಕೆ ಪಡೆದಿದ್ದು, ಬಸ್ ಅನ್ನು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ.
ದ್ವಿಚಕ್ರ ವಾಹನ ಸವಾರರು ಭಾರಿ ವಾಹನಗಳ ಪಕ್ಕದಲ್ಲಿ ಸಾಗುವಾಗ ಹೆಚ್ಚು ಎಚ್ಚರಿಕೆ ವಹಿಸುವಂತೆ ಬೆಂಗಳೂರು ಸಂಚಾರ ಉತ್ತರ ವಿಭಾಗದ ಡಿಸಿಪಿ ಸಿರಿಗೌರಿ ಡಿ.ಆರ್ ತಿಳಿಸಿದ್ದಾರೆ.