ಮನೆ ಅಪರಾಧ ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ: ಮಾಜಿ ಕಾರ್ಪೊರೇಟರ್ ವಿರುದ್ಧ ದೂರು ದಾಖಲು

ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ: ಮಾಜಿ ಕಾರ್ಪೊರೇಟರ್ ವಿರುದ್ಧ ದೂರು ದಾಖಲು

0

ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್​ ಐಆರ್ ದಾಖಲಿಸಲಾಗಿದೆ.

ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜು, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್​ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದರು.

ಈ ವಿಚಾರವಾಗಿ ಶಾಸಕ ಕೆ ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದು, ಅವನು ಮಾತನಾಡಿರುವ ವಿಚಾರಗಳನ್ನು ಈಗ ಬಹಿರಂಗಪಡಿಸಲು ಆಗದು. ಆತ ಇದಕ್ಕೂ ಮೊದಲು ಬೇರೆ ಶಾಸಕರಿಗೆ ಕೂಡ ಬೆದರಿಕೆ ಹಾಕಿದ್ದ. ಪದ್ಮರಾಜು​​ ಮಗಳಿಗೂ ನಾನೇ ಕೆಲಸ ಕೊಡಿಸಿದ್ದೇನೆ ಎಂದು ತಿಳಿಸಿದ್ದಾರೆ.

ಪದ್ಮರಾಜು​​ ಬೆದರಿಕೆ ಹಾಕಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರಿಗೂ ದೂರು ನೀಡುತ್ತೇನೆ. ಪದ್ಮರಾಜುನನ್ನ ಗಡಿಪಾರು ಮಾಡುವಂತೆ ಆಗ್ರಹಿಸುತ್ತೇನೆ ಎಂದು ಗೋಪಾಲಯ್ಯ ಹೇಳಿದ್ದಾರೆ.

ವಿಧಾನಸಭೆ ಸ್ಪೀಕರ್​ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ಶಾಸಕ ಕೆ.ಗೋಪಾಲಯ್ಯ ದೂರು ನೀಡಿದ್ದಾರೆ.