ಮನೆ ಅಪರಾಧ ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿ: ಇಬ್ಬರು ಸಾವು

0

ತುಮಕೂರು: ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಪ್ರಭುಗೌಡ (28) ಸ್ಥಳದಲ್ಲೇ ಸಾವು. ಮತ್ತೋರ್ವ ಆನಂದ್ (30) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮೃತರು ಉತ್ತರ ಕರ್ನಾಟಕ ಮೂಲದವರು ಎನ್ನಲಾಗಿದೆ.

ಪಂಚರ್ ಆಗಿ ನಿಂತಿದ್ದ ಮಿನಿ ಟೆಂಪೋ ಲಾರಿಗೆ ಬೈಕ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.

ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.