ಮನೆ ರಾಜಕೀಯ ರಾಜ್ಯಸಭೆ ಚುನಾವಣೆ: 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ- ಹೆಚ್​​ ಡಿ ಕುಮಾರಸ್ವಾಮಿ

ರಾಜ್ಯಸಭೆ ಚುನಾವಣೆ: 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ- ಹೆಚ್​​ ಡಿ ಕುಮಾರಸ್ವಾಮಿ

0

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಎಂದು ಜೆಡಿಎಸ್ ನಾಯಕ ಹೆಚ್​​ ಡಿ ಕುಮಾರಸ್ವಾಮಿ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ, ರಾಜ್ಯ ನಾಯಕರ ಸಲಹೆ ಮೇರೆಗೆ ಎನ್ ​ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಬಿಜೆಪಿಯಲ್ಲಿ ಹೆಚ್ಚುವರಿ ಮತಗಳಿವೆ. ವಿಪಕ್ಷದ ಮತಗಳು ನಷ್ಟವಾಗಬಾರದು ಎಂದರು.

ಹೆಚ್ಚುವರಿ ವೋಟ್ ಕುಪೇಂದ್ರಗೆ ವರ್ಗಾವಣೆ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಈ ಕಾರಣಕ್ಕೆ ಈ ತೀರ್ಮಾನ ಮಾಡಲಾಗಿದೆ ಎಂದು ಅವರು ಹೇಳಿದರು.