ಮನೆ ಸ್ಥಳೀಯ ಸಂವಿಧಾನದ ಮಹತ್ವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಅಳವಡಿಸಿಕೊಳ್ಳಬೇಕು: ಅಶಾದ್ ಉರ್ ರೆಹಮಾನ್

ಸಂವಿಧಾನದ ಮಹತ್ವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಅಳವಡಿಸಿಕೊಳ್ಳಬೇಕು: ಅಶಾದ್ ಉರ್ ರೆಹಮಾನ್

0

ಮೈಸೂರು: ಸಂವಿಧಾನದ ಮಹತ್ವನ್ನು ಪ್ರತಿಯೊಬ್ಬರೂ ತಿಳಿದುಕೊಂಡು, ಅಳವಡಿಸಿಕೊಳ್ಳಬೇಕು ಎಂದು  ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಅಶಾದ್ ಉರ್ ರೆಹಮಾನ್  ಅವರು ತಿಳಿಸಿದರು.

ಇಂದು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ  ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಏರ್ಪಡಿಸಿದ್ದ ಸೈಕಲ್ ರ್ಯಾಲಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಾಬಾ ಸಾಹೇಬ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿದರು. ಇವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಶಾಸಕಾಂಗ,  ಕಾರ್ಯಾಂಗ, ನ್ಯಾಯಾಂಗ ಹೇಗೆ ಆಡಳಿತ ನಡೆಸಬೇಕು ಎಂಬುದನ್ನು ಸಂವಿಧಾನದಲ್ಲಿ ತಿಳಿಸಲಾಗಿದೆ. ನಾವು ಇಂದು ನೆಮ್ಮದಿಯ ಜೀವನ ನಡೆಸುತ್ತಿರುವುದು ಸಂವಿಧಾನ ನೀಡಿರುವ ಕೊಡುಗೆಯಾಗಿದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಅವರು ಸಂವಿಧಾನ ಪೀಠಿಕೆಯನ್ನು ಬೋಧನೆ ಮಾಡಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ ಕೆ ಹರೀಶ್, ಮೈಸೂರು ಮಹಾನಗರ ಪಾಲಿಕೆಯ ಜೋನಲ್ 6 ನ ಉಪವಿಭಾಗಾಧಿಕಾರಿ ಪ್ರತಿಭಾ, ಜೋನಲ್ 1 ನ ಉಪವಿಭಾಗಾಧಿಕಾರಿ ಮಂಜುನಾಥ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.