ಮನೆ ರಾಜ್ಯ ಸಿಎಂ ಸಿದ್ದರಾಮಯ್ಯರ 15ನೇ ಬಜೆಟ್ ಮಂಡನೆ ಆರಂಭ

ಸಿಎಂ ಸಿದ್ದರಾಮಯ್ಯರ 15ನೇ ಬಜೆಟ್ ಮಂಡನೆ ಆರಂಭ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16) ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2.O ಸರ್ಕಾರದ ಸಂಪೂರ್ಣ ಬಜೆಟ್​ ಹಲವು ನಿರೀಕ್ಷೆ ಮೂಡಿಸಿದೆ.

ಏಳನೇ ವೇತನ ಆಯೋಗದ ವರದಿಯಲ್ಲಿನ ಕೆಲ ಅಂಶಗಳನ್ನು ಘೋಷಿಸುವ ಸಾಧ್ಯತೆ ಇದೆ. ಬಜೆಟ್​ನಲ್ಲಿ ಮದ್ಯದ ಮೇಲಿನ ಸುಂಕ ಏರಿಕೆ ಮಾಡುವ ಸಾಧ್ಯತೆ ಇದೆ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿಶೇಷ ಅನುದಾನ ಮೀಸಲಿಡಬಹುದು. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಬಹುದು. ನಮ್ಮ ಮೆಟ್ರೋ ಮಾರ್ಗ ವಿಸ್ತರಣೆಗೆ ಹೆಚ್ಚಿನ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇದೆ. ರಾಜ್ಯದ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಅನುದಾನ ಘೋಷಣೆಯಾಗುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆಗಳೂ ಹೆಚ್ಚಾಗಿದ್ದು ಅದರಂತೆ ಮುಖ್ಯಮಂತ್ರಿಗಳು ಈ ಬಾರಿ ಯಾವೆಲ್ಲಾ ಗ್ಯಾರಂಟಿಗಳನ್ನು ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.