ಮೈಸೂರು: ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದ ಈ ಸಂದರ್ಭದಲ್ಲಿ ಸಂವಿಧಾನದ ಅರಿವು ಸಮಾಜದ ಪ್ರತಿ ಪ್ರಜೆಗಳಿಗೆ ತಲುಪಿಸುವುದು ಸರ್ಕಾರದ ಆಶಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.
ಇಂದು ನಗರದ ಟೌನ್ ಹಾಲ್ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆಟೋ ಚಾಲಕರಿಂದ ಏರ್ಪಡಿಸಿದ್ದ ಆಟೋ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸoವಿಧಾನದ ಮಹತ್ವ ಹಾಗೂ ಆಶೋತ್ತರಗಳನ್ನು ಪ್ರತಿಯೊಬ್ಬರು ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದ ಮಹತ್ವವನ್ನು ತಿಳಿಯಲು ಪೀಠಿಕೆಯನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದ ಸಂವಿಧಾನದ ಜಾಗೃತಿ ಜಾಥಾವನ್ನು ಎಲ್ಲಾ ಕಡೆ ಹಮ್ಮಿಕೊಳ್ಳಲಾಗಿದೆ. ಇಂದು ಹೆಚ್ಚು ಜನರು ಆಟೋ ರ್ಯಾ ಲಿ ಮಾಡಿ ಸಂವಿಧಾನದ ಪೀಠಿಕೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೊದಲು ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು. ನಂತರ ಸಂವಿಧಾನ ಪೀಠಿಕೆಯನ್ನು ಬೋಧನೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಜಂಟಿ ಕೃಷಿ ನಿರ್ದೇಶಕರಾದ ಚಂದ್ರ ಶೇಖರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳು
ಶೂನ್ಯ ಸಂಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಶಾಸಕ ನಾಗೇಂದ್ರ
ವೇದವ್ಯಾಸಚಾರ್ ಶ್ರೀಷಾನಂದರ ಮೇಲೆ ಸುಪ್ರೀಂ ಕೋರ್ಟ್ ಗರಂ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಲ್ಲದ ಎತ್ತೆತ್ತರ ಏರುತ್ತಿರುವ ಅಕ್ರಮ ಕಟ್ಟಡಗಳು….
ಬಳ್ಳಾರಿಯಲ್ಲಿ ಸ್ಟಾಪ್ ನರ್ಸ್ ಹುದ್ದೆಗಳಿಗೆ ಭರ್ತಿ….
ಕೆಪಿಎಸ್ಸಿ ಯಿಂದ ಕೃಷಿ ಇಲಾಖೆಯಲ್ಲಿ ಹುದ್ದೆಗಳು
ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹುದ್ದೆಗಳು
ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳು
ಕೆಪಿಎಸ್ಸಿ ಹುದ್ದೆಯ 327 ಗ್ರೂಪ್ ಬಿ ಗ್ರೂಪ್ ಸಿ ಹುದ್ದೆಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.