ಮನೆ ರಾಜ್ಯ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಹಾವೇರಿ: ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭ್ರಷ್ಟಾಚಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಭ್ರಷ್ಟಾಚಾರ ಇಲ್ಲ ಎಂದು ಯಾರು ಹೇಳಿದರು? ಭ್ರಷ್ಟಾಚಾರ ಮುಕ್ತವಾಗುವುದು ಅಸಾಧ್ಯ. ಕಪ್ಪು ಕುರಿಗಳು ಯಾವಾಗಲೂ ಇರುತ್ತವೆ. ಆದರೆ ಭಷ್ಟ್ರಾಚಾರಿಗಳನ್ನು ಗುರುತಿಸಿ ಶಿಕ್ಷಿಸಲಾಗುತ್ತದೆ ಎಂದು ಹೇಳಿದರು.

ದೇಶದ 140 ಕೋಟಿ ಜನರು ಈ ಸಂಪನ್ಮೂಲಗಳಲ್ಲಿ ಪಾಲುದಾರರಾಗಿದ್ದಾರೆ. ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ದಲಿತರು ಮಾತ್ರವಲ್ಲ, ಈ ದೇಶದ ಪ್ರತಿಯೊಬ್ಬ ನಾಗರಿಕರಿಗೂ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಹಕ್ಕಿದೆ. ಯಾವುದೇ ಸಮುದಾಯ ಅಥವಾ ಅಲ್ಪಸಂಖ್ಯಾತರು ಮಾತ್ರ ಸಂಪನ್ಮೂಲಗಳ ಮೇಲೆ ಹಕ್ಕುಗಳನ್ನು ಹೊಂದಲು ಸಾಧ್ಯವಿಲ್ಲ ಎಂದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಇತ್ತೀಚೆಗಷ್ಟೇ ಮಂಡಿಸಿದ ಬಜೆಟ್‌ ನಲ್ಲಿ ತಮ್ಮ ವರುಣಾ ವಿಧಾನಸಭಾ ಕ್ಷೇತ್ರಕ್ಕೆ 2 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಅವರು ಈಗ ಯಾವ ಹುದ್ದೆಯಲ್ಲಿದ್ದಾರೆ? ಹಂಚಿಕೆ ಕುರಿತು ಮಾಧ್ಯಮ ವರದಿ ಸುಳ್ಳು ಎಂದು ತಳ್ಳಿಹಾಕಿದರು.