ಮನೆ ಕಾನೂನು ಸಂತ ಜೆರೋಸಾ ಪ್ರಕರಣ: ಬಿಜೆಪಿಯ ಇಬ್ಬರು‌ ಶಾಸಕರಿಗೆ ನಿರೀಕ್ಷಣಾ ಜಾಮೀನು

ಸಂತ ಜೆರೋಸಾ ಪ್ರಕರಣ: ಬಿಜೆಪಿಯ ಇಬ್ಬರು‌ ಶಾಸಕರಿಗೆ ನಿರೀಕ್ಷಣಾ ಜಾಮೀನು

0

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಸಂತ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಬಿಜೆಪಿಯ ಇಬ್ಬರು‌ ಶಾಸಕರಿಗೆ ನಿರೀಕ್ಷಣಾ ಜಾಮೀನು ದೊರಕಿದೆ.

ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಲಭ್ಯವಾಗಿದೆ.

ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನನ್ವಯ ಬಿಜೆಪಿ ಶಾಸಕರ ಸಹಿತ ವಿಹಿಂಪ ಮುಖಂಡ ಶರಣ್ ಪಂಪ್ವೆಲ್, ಕಾರ್ಪೊರೇಟರ್ ಸಂದೀಪ್ ಹಾಗೂ ಭರತ್ ಕುಮಾರ್ ವಿರುದ್ಧ ಮಂಗಳೂರು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು.

ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.