ಮನೆ ಕಾನೂನು ಸುಪ್ರೀಂ ಕೋರ್ಟ್‌ ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ನಿಧನ

ಸುಪ್ರೀಂ ಕೋರ್ಟ್‌ ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ನಿಧನ

0

ಸುಪ್ರೀಂ ಕೋರ್ಟ್‌ ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನರಾಗಿದ್ದಾರೆ.

ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಮಂಗಳವಾರ ರಾತ್ರಿ ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದಾರೆ. ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ದೇಶವು ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿತು. ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ನಾರಿಮನ್ ಜನವರಿ 10, 1929 ರಂದು ಮ್ಯಾನ್ಮಾರ್‌ನಲ್ಲಿ ಪಾರ್ಸಿ ಕುಟುಂಬದಲ್ಲಿ ಜನಿಸಿದರು . ಅವರು ಬಾಂಬೆ ಹೈಕೋರ್ಟ್‌ನಲ್ಲಿ ತಮ್ಮ ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದರು.

ಅವರ ಪುತ್ರ ರೋಹಿಂಟನ್ ನಾರಿಮನ್ ಕೂಡ ಹಿರಿಯ ವಕೀಲರಾಗಿದ್ದು ಸುಪ್ರೀಂಕೋರ್ಟ್ ​ನ ನ್ಯಾಯಮೂರ್ತಿಯಾಗಿದ್ದಾರೆ. ನಾರಿಮನ್ ನವೆಂಬರ್ 1950ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಅವರು ಎಎಎಸ್ ​ಜಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಅವರ ಸುದೀರ್ಘ ಕಾನೂನು ವೃತ್ತಿ ಜೀವನದಲ್ಲಿ ನಾರಿಮನ್ ಅವರು ಅನೇಕ ದೊಡ್ಡ ಐತಿಹಾಸಿಕ ಪ್ರಕರಣಗಳ ಭಾಗವಾಗಿದ್ದಾರೆ. ಕೊಲಿಜಿಯಂ ವ್ಯವಸ್ಥೆ ಅಸ್ತಿತ್ವಕ್ಕೆ ಬರಲು ಈ ವಿಷಯ ಪ್ರಮುಖ ಕಾರಣ ಎನ್ನಲಾಗಿದೆ. 1975ರಲ್ಲಿ ಘೋಷಿಸಲಾದ ತುರ್ತು ಪರಿಸ್ಥಿತಿ ಸರ್ಕಾರದ ನಿರ್ಧಾರದಿಂದ ನಾರಿಮನ್ ಅವರು ಸಂತೋಷವಾಗಿರಲಿಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರ ತೆಗೆದುಕೊಂಡ ತುರ್ತು ನಿರ್ಧಾರವನ್ನು ವಿರೋಧಿಸಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದರು.