ಮನೆ ರಾಜ್ಯ ಮಾರ್ಚ್ 4 ರಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಮಾರ್ಚ್ 4 ರಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

0

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 4 ರಿಂದ ಸಾರಿಗೆ ನೌಕರರು ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ.

ಸೇವೆಯಿಂದ ವಜಾ ಆಗಿರುವ ಸಿಬ್ಬಂದಿಗೆ ನ್ಯಾಯ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಿವೃತ್ತಿ ನೌಕರರು ಹಾಗೂ ಹಾಲಿ ನೌಕರರು ನಗರದ ಫ್ರೀಡಂ ಪಾರ್ಕ್ ನಲ್ಲಿ ಕುಟುಂಬ ಸಮೇತ ಹೋರಾಟ ನಡೆಸಲು ಮುಂದಾಗಿದ್ದಾರೆ. ಈ ಹಿಂದಿನ ಸರ್ಕಾರ ನೌಕರರಿಗೆ ಭರವಸೆ ನೀಡಿ ಕೈತೊಳೆದುಕೊಂಡಿದೆ. ಹೀಗಾಗಿ ಹಾಲಿ ಸರ್ಕಾರ ನೌಕರರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂದು ರಾಜ್ಯ ಸಾರಿಗೆ ನಿಗಮದ ಕೂಟ ಒತ್ತಾಯಿಸಿದೆ.

ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಬಸ್ ಗಳು ನಿಲ್ಲುತ್ತೆ, ಮುಷ್ಕರಕ್ಕೂ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೇಡಿಕೆಗಳೇನು?

2020ರ ಜ.1ರಿಂದ ಅನ್ವಯವಾಗುವಂತೆ ವೇತನ ಹೆಚ್ಚಳದ ಬಾಕಿ ಹಣ ನೀಡಬೇಕು.

2020ರ ಜ.1ರಿಂದ ರಿಂದ ನಿವೃತ್ತ ನೌಕರರ ವೇತನ ಹೆಚ್ಚಳದ ಫಿಕ್ಸೇಷನ್ ಆಗಬೇಕು.

38 ತಿಂಗಳ ತುಟ್ಟಿ ಭತ್ಯೆ ಬಾಕಿ ಹಣ ನೀಡಬೇಕು.

2021ರ ಮುಷ್ಕರದ ವೇಳೆ BJP ಸರ್ಕಾರ ತೆಗೆದುಕೊಂಡಿರುವ ಎಲ್ಲಾ ರೀತಿಯ ಶಿಕ್ಷೆಗಳು ಹಿಂಪಡೆಯಬೇಕು.

ಎಲೆಕ್ಟ್ರಿಕ್ ಬಸ್‌ಗಳನ್ನು ಸಾರಿಗೆ ನಿಗಮಗಳೇ ಓಡಿಸಬೇಕು.

ಕೇಂದ್ರ ಸರ್ಕಾರ FAME-2 ಯೋಜನೆ ( ಎಲೆಕ್ಟ್ರಿಕ್ ಬಸ್‌ಗಳನ್ನು) ಖಾಸಗಿಯವರ ಮೂಲಕ ಓಡಿಸುವ ಖಾಸಗೀಕರಣವನ್ನು ವಿರೋಧಿಸಬೇಕು.

ಭ್ರಷಾಚಾರದ ಆಡಳಿತಕ್ಕೆ ಕಡಿವಾಣ ಹಾಕಬೇಕು.

ಆಡಳಿತ ವರ್ಗ ಏಕ ಪಕ್ಷೀಯವಾಗಿ ಸುತ್ತೋಲೆಗಳನ್ನು ತರುವ ಪದ್ಧತಿ ನಿಲ್ಲಿಸಿ, ಕಾರ್ಮಿಕ ಸಂಘಗಳ ಜತೆ ಮಾತುಕತೆ ನಡೆಸಿ ಉತ್ತಮ ಕೈಗಾರಿಕಾ ಬಾಂದವ್ಯ ರೂಪಿಸಬೇಕು.

ಸರ್ಕಾರಿ ನೌಕರರ ಸಂಬಳ ಸಾರಿಗೆ ನೌಕರರಿಗೂ ವಿಸ್ತರಣೆ ಮಾಡಬೇಕು.

ಇದನ್ನೂ ಓದಿ: ಜ್ಞಾನ ದೇಗುಲ ಘೋಷ ವಾಕ್ಯದ ವಿವಾದ ಬೆನ್ನಲ್ಲೇ ವಿಡಿಯೋ ಬಿಡುಗಡೆ; ಶಿಕ್ಷಕರಾಗಿ ನ್ಯಾಯದ ಪಾಠ ಮಾಡಿದ H.C.ಮಹದೇವಪ್ಪ

ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಸಾವಿರಾರು ಸಿಬ್ಬಂದಿಗಳು ಭಾಗಿಯಾಗಲಿದ್ದಾರೆ. ಸಾಂಕೇತಿಕ ಪ್ರತಿಭಟನೆಗೆ ಸರ್ಕಾರ ಸ್ಪಂದಿಸದಿದ್ದರೆ ಮುಷ್ಕರ ನಡೆಸುವುದಾಗಿ ಸಾರಿಗೆ ನೌಕರರ ಕೂಟ ಎಚ್ಚರಿಕೆ ನೀಡಿದೆ.