ಮೈಸೂರು: ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ ಸಮುದ್ರದಲ್ಲಿ ಈಜಿರುವ ನಾಯಕ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಪ್ರಧಾನಿ ಮೋದಿಗೆ ಹೋಲಿಸಬೇಡಿ ಎಂದರು.
ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾಡುವುದನ್ನು ಕಲಿತಿದ್ದಾನೆ. ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ಗೆ ಏನು ವ್ಯತ್ಯಾಸ ಇದೆ ಹೇಳಿ? ಇಬ್ಬರು ಕೂಡಾ ಸುಮ್ಮನೆ ಕೂಗಾಡುತ್ತಾರೆ ಎಂದರು. ಅಲ್ಲದೆ, ಶೀಘ್ರದಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಡಾ.ಮೋಹನ್ ಅವರು ಆಕಾಂಕ್ಷಿಯಾಗಿದ್ದರು. ಇದೀಗ ಹರ್ಷವರ್ಧನ್ ಕೂಡ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ನನಗೆ ನನ್ನ ಅಳಿಯ ಡಾ.ಮೋಹನ್ ಆಕಾಂಕ್ಷಿ ಎನ್ನುವುದು ಗೊತ್ತಿತ್ತು. ಈಗ ಹರ್ಷವರ್ಧನ್ ಆಕಾಂಕ್ಷಿ ಎಂಬುದು ಗೊತ್ತಾಗಿದೆ. ಈಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ ಎಂದರು.
ಮೋಹನ್ ಹಾಗೂ ಹರ್ಷವರ್ಧನ್ ತುಂಬಾ ಅನ್ಯೋನ್ಯವಾಗಿದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ. ಚಾಮರಾಜನಗರ ಕ್ಷೇತ್ರದ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಹೇಳಿದ್ದೇನೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.