ಮನೆ ರಾಜ್ಯ “ಬೃಹತ್ ಕ್ಯಾನ್ವಾಸ್”  ಮೇಲೆ ಚಿತ್ರ ಬಿಡಿಸುವ ಮೂಲಕ ಸಂವಿಧಾನ ಜಾಗೃತಿ

“ಬೃಹತ್ ಕ್ಯಾನ್ವಾಸ್”  ಮೇಲೆ ಚಿತ್ರ ಬಿಡಿಸುವ ಮೂಲಕ ಸಂವಿಧಾನ ಜಾಗೃತಿ

0

ಮೈಸೂರು: “ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾ.ವ) ವಿದ್ಯಾರ್ಥಿಗಳಿಂದ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ “ಬೃಹತ್ ಕ್ಯಾನ್ವಾಸ್” ಮೇಲೆ ಸಂವಿಧಾನ ಸಂಬಂಧಿ ಚಿತ್ರಗಳನ್ನು ಬಿಡಿಸುವ  ಮೂಲಕ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ ಅವರು ಚಾಲನೆ ನೀಡಿದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ರೀತಿಯಲ್ಲಿ ಕಾರ್ಯಕ್ರಮಗಳನ್ನು  ಹಮ್ಮಿಕೊಳ್ಳುವುದರ ಮೂಲಕ ಸಾರ್ವಜನಿಕರಿಗೆ ಸಂವಿಧಾನ ಪೀಠಿಕೆ ಹಾಗೂ ನಿರ್ದೇಶಕ ತತ್ವಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನದ ಬಗ್ಗೆ ತಿಳಿಯಬೇಕು ಎಂದು ಅವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಅವರು ಮಾತನಾಡಿ ಭಾರತದ ಸಂವಿಧಾನದ ಬಗ್ಗೆ ಇಂದಿನ ಯುವಕರು ಹಾಗೂ ಸಾರ್ವಜನಿಕರು ಕಡಿಮೆ ಜ್ಞಾನವನ್ನು ಹೊಂದಿದ್ದಾರೆ. ಹಾಗಾಗಿ ಇದರ ಬಗ್ಗೆ ಜಾಗೃತಿಯನ್ನು ಮೂಡಿಸಿ ಅರಿವನ್ನು ತುಂಬುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.

ಈ ಸಂದರ್ಭದಲ್ಲಿ ಪ್ರಾಚ್ಯವಸ್ತು ಮತ್ತು ಸಂಗ್ರಹಾಲಯ ಇಲಾಖೆಯ ಆಯುಕ್ತರಾದ ದೇವರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂವಿಧಾನ ಎಂಬುದು ಅವಿರತ ಶಕ್ತಿಯಾಗಿ ನಮ್ಮ ಹಿಂದೆ ಕೆಲಸ ಮಾಡುತ್ತಿದೆ. ಅದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿದು ಅದರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಈಗಿರುವ ಸಮಸ್ಯೆಗಳು ನಿವಾರಣೆಯಾಗಿ ಶಾಂತಿ ನೆಲಸುತ್ತದೆ ಎಂದರು.