ಮನೆ ರಾಷ್ಟ್ರೀಯ ಇಂಫಾಲ್‌ ನ ವಿಶ್ವವಿದ್ಯಾನಿಲಯದ ಆವರಣದೊಳಗೆ ಸ್ಫೋಟ: ಓರ್ವ ಸಾವು

ಇಂಫಾಲ್‌ ನ ವಿಶ್ವವಿದ್ಯಾನಿಲಯದ ಆವರಣದೊಳಗೆ ಸ್ಫೋಟ: ಓರ್ವ ಸಾವು

0

ಇಂಫಾಲ: ಮಣಿಪುರದ ಇಂಫಾಲ್‌ ನಲ್ಲಿ ಶುಕ್ರವಾರ ವಿಶ್ವವಿದ್ಯಾನಿಲಯದ ಆವರಣದ ಒಳಗೆ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿರುವುದಾಗಿವರದಿಯಾಗಿದೆ.

ಸುಧಾರಿತ ಸ್ಫೋಟಕ ಸಾಧನ (ಐಇಡಿ) ದಿಂದ ಈ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸ್ಪೋಟದಲ್ಲಿ ಇಬ್ಬರು ವ್ಯಕ್ತಿಗಳು ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ, ಇನ್ನೋರ್ವ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.