ಮನೆ ರಾಜ್ಯ ಸಂವಿಧಾನ ಜಾಗೃತಿ ಜಾಥಾ: ಉತ್ತಮ ಕಾರ್ಯಕ್ರಮ ಆಯೋಜನೆ ವಿಭಾಗದಲ್ಲಿ ಮೈಸೂರಿಗೆ ಪ್ರಥಮ ಸ್ಥಾನ

ಸಂವಿಧಾನ ಜಾಗೃತಿ ಜಾಥಾ: ಉತ್ತಮ ಕಾರ್ಯಕ್ರಮ ಆಯೋಜನೆ ವಿಭಾಗದಲ್ಲಿ ಮೈಸೂರಿಗೆ ಪ್ರಥಮ ಸ್ಥಾನ

0

ಮೈಸೂರು: ಸಂವಿಧಾನದ ಜಾಗೃತಿ ಜಾಥಾದಲ್ಲಿ ಮೈಸೂರು ವಿಭಾಗದಲ್ಲಿ ಮೈಸೂರು ಜಿಲ್ಲೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿದ್ದಕ್ಕಾಗಿ ಉತ್ತಮ ಕಾರ್ಯಕ್ರಮ ಆಯೋಜನೆ (ಆಕ್ಟಿವಿಟಿ)  ವಿಭಾಗದಲ್ಲಿ ಪ್ರಥಮ ಸ್ಥಾನ ಲಭಿಸಿದೆ

 ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಜಾಗೃತಿ ಐಕ್ಯತಾ ಸಮಾವೇಶ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ‌ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

 ಈ ಪ್ರಶಸ್ತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ ಅವರು  ಸ್ವೀಕರಿಸಿದರು.