ಮನೆ ರಾಜ್ಯ ಉತ್ತರಕನ್ನಡ: ಮಂಗನ ಕಾಯಿಲೆಗೆ ಎರಡನೇ ಬಲಿ

ಉತ್ತರಕನ್ನಡ: ಮಂಗನ ಕಾಯಿಲೆಗೆ ಎರಡನೇ ಬಲಿ

0

ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆಗೆ ಒಂದೇ ವಾರದಲ್ಲಿ ಎರಡನೇ ಬಲಿಯಾಗಿದೆ.

ಕೊರ್ಲಕ್ಯೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ  60ವರ್ಷದ ಮಹಿಳೆ ಭಾನುವಾರ ರಾತ್ರಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮೂರು ದಿನದ ಹಿಂದೆ ಪುನಃ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಳು.

ತಾಲೂಕಿನಲ್ಲಿ ಇಲ್ಲಿಯವರೆಗೆ 43 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.