ಮನೆ ಅಪರಾಧ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

0

ಕಲಬುರಗಿ: ತಾಲೂಕಿನ ಅವರಾದ್ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.

ಬೈಕ್ ಮೇಲೆ ಸವಾರಿ ಮಾಡುತ್ತಿದ್ದ ಮಾವ ಮತ್ತು ಸೊಸೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪಿದವರನ್ನು ಗುರುನಾಥ (46) ಹಾಗೂ ಸಂಗೀತ (35) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಈ ಘಟನೆಯಲ್ಲಿ ಲಕ್ಷ್ಮಣ ಎಂಬುವವರಿಗೆ ಗಂಭೀರ ಗಾಯವಾಗಿದೆ. ಕಲಬುರಗಿ ತಾಲೂಕಿನ ಬೆಲೂರ್ ನಿಂದ ಮದುವೆಗಾಗಿ ಬಸವಕಲ್ಯಾಣಕ್ಕೆ ತೆರಳುವಾಗ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಟ್ರಾಫಿಕ್ ಒನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಾಗಿದೆ.