ಮನೆ ಅಪರಾಧ ಟಿಪ್ಪರ್ ಗೆ ಬೈಕ್ ಡಿಕ್ಕಿ: ಯುವಕ‌ ಸಾವು, ಓರ್ವನಿಗೆ ಗಾಯ

ಟಿಪ್ಪರ್ ಗೆ ಬೈಕ್ ಡಿಕ್ಕಿ: ಯುವಕ‌ ಸಾವು, ಓರ್ವನಿಗೆ ಗಾಯ

0

ಮಸ್ಕಿ: ತಾಲೂಕಿನ ಮುದಬಾಳ ಕ್ರಾಸ್ ಸಮೀ‌ಪ ನಿಂತಿದ್ದ‌ ಟಿಪ್ಪರ್ ಗೆ‌ ಬೈಕ್  ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನಪ್ಪಿದ್ದು, ಮತ್ತೊಬ್ಬನಿಗೆ ಗಾಯಗಳಾದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಮೃತ ಯುವಕ ಮಂಜುನಾಥ ಭೋವಿ (26) ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕ ಬಾಬು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ.

ಮಂಜುನಾಥ ಮತ್ತು ಬಾಬು ಮಸ್ಕಿಯ ಭ್ರಮರಾಂಭ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿಕೊಂಡು ಸ್ವ ಗ್ರಾಮ ಲಿಂಗಸುಗೂರು ತಾಲೂಕಿನ ಹೊನ್ನಾಳಿಗೆ ತೆರಳುತ್ತಿದ್ದರು. ಮಾರ್ಗ ಮದ್ಯ ಟೈಯರ್ ಪಂಕ್ಚರ್ ಆಗಿ ನಿಂತಿದ್ದ ಟಿಪ್ಪರ್ ಕಾಣದೇ ಬೈಕ್ ಸವಾರ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ.

ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.