ಮನೆ ಆರೋಗ್ಯ ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ

0

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಮಂಗನ ಕಾಯಿಲೆಗೆ ಸೋಂಕಿಗೆ ಮತ್ತೊಂದು ಬಲಿಯಾಗಿದೆ.

ಕೂಲಿ ಕಾರ್ಮಿಕ ಮಹಿಳೆ ಕೊಟ್ರಮ್ಮ (43) ಮಂಗನ ಕಾಯಿಲೆಗೆ ಪ್ರಾಣ ಕಳೆದುಕೊಂಡಿದ್ದಾರೆ.

ಕೊಪ್ಪ ತಾಲೂಕಿನ ನುಗ್ಗಿ ಗ್ರಾ.ಪಂ. ವ್ಯಾಪ್ತಿಯ ದೇವಗನ್ ಎಸ್ಟೇಟ್ ಮಹಿಳೆ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಕಳೆದ ಸೋಮವಾರ ವೈದ್ಯರು ಮಹಿಳೆಯ ರಕ್ತದ ಮಾದರಿ ಸಂಗ್ರಹಿಸಿದ್ದರು. ಎಸ್ಟೇಟಿಗೆ ಸೌದೆ ತರಲು ಹೋದಾಗ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೊಪ್ಪ ಹಾಗೂ ಎನ್.ಆರ್ ಪುರದಲ್ಲಿ ಮತ್ತೆ 6 ಮಂದಿಗೆ ಸೋಂಕು ತಗುಲಿದೆ. ಕೊಪ್ಪ ತಾಲೂಕಿನಲ್ಲೇ ಮಂಗನ ಕಾಯಿಲೆ ಹೆಚ್ಚಾಗಿದೆ. ಕೊಪ್ಪ ತಾಲೂಕಿನಲ್ಲಿ ನಿನ್ನೆ ಒಂದೇ ದಿನ 6 ಜನರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ.