ಬೆಂಗಳೂರು: ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.
ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮು, 1985ರಲ್ಲಿ ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯೂ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮು ಅವರು, ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು. 2013ರಲ್ಲಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್ ಸೇರಿ, ರಾಜಕೀಯ ಆರಂಭಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
ಬೀಜಗಳಿಂದ ತಯಾರಾದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ
ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಅಧಿಕಾರಿ ಶ್ರೇಣಿ ಹುದ್ದೆಗಳ ಭರ್ತಿ
ಪ್ಲಾಸ್ಟಿಕ್ ಬಾಟಲ್ ಗಳಿಂದ ಆರೋಗ್ಯಕ್ಕೆ ಮಾರಕ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.