ಬೆಂಗಳೂರು: ಇಡೀ ರಾಜ್ಯದಲ್ಲಿ ಕಿಚ್ಚು ಹಬ್ಬಿಸಿದ್ದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆಯ ಎಫ್ ಎಸ್ ಎಲ್ ವರದಿ ಹೊರ ಬಿದ್ದಿದ್ದು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ದೃಢಪಟ್ಟಿದೆ.
ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. FSLನಲ್ಲಿ ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ.
ಎಫ್ ಎಸ್ ಎಲ್ ವರದಿ ಅನ್ವಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರ ತನಿಖೆ ವೇಳೆ ಕೆಲ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈಗಾಗಲೇ ವಶಕ್ಕೆ ಪಡೆದಿದ್ದ ಅನುಮಾನಿತ ವ್ಯಕ್ತಿಗಳ ವಾಯ್ಸ್ ರವಾನೆ ಮಾಡಲಾಗಿದೆ. ಅನುಮಾನಿತರ ಪೈಕಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.
ಎಫ್ ಎಸ್ ಎಲ್ ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಆರೋಪಿಯನ್ನು ಬಂಧಿಸಲು ತಯಾರಿ ನಡೆದಿದೆ.