ಬೆಂಗಳೂರು: 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಬಸ್ , ರೈಲು, ಬಸ್ ಸ್ಟಾಂಡ್ ಸೇರಿ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ.
ಸಿಎಂ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ಗೆ ಬೆದರಿಕೆ ಇ ಮೇಲ್ ಬಂದಿದ್ದು, ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಸ್ಫೋಟಿರುವುದಾಗಿ ಇಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ.
ಈ ಇಮೇಲ್ ಬೆದರಿಕೆ ಸಂಬಂಧ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ. 10786progongmail.com ಎನ್ನುವ ಮೇಲ್ ಐಡಿಯಿಂದ ಬೆದರಿಕೆ ಬಂದಿದ್ದು, ಸದ್ಯ ಸಿಸಿಬಿ ಪೊಲೀಸರು ಈ ಇಮೇಲ್ ಬಗ್ಗೆ ತನಿಖೆ ನಡೆಸಿದ್ದಾರೆ.