ಬೆಂಗಳೂರು: ಹಿರಿಯ ವಕೀಲ ಹಾಗೂ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಕೀಲರ ಸಂಘದ ಉಪಾಧ್ಯಕ್ಷರಾದ ಡಿ.ಎಂ. ಲಿಂಗೇಗೌಡ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯ ಮೇಲೆ ಕೆಪಿಸಿಸಿಯ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಈ ನೇಮಕ ಮಾಡಿದ್ದಾರೆ.
ಮೂಲತಃ ಕನಕಪುರದ ದೊಡ್ಡ ಕಬ್ಬಳ್ಳಿಯವರಾದ ಲಿಂಗೇಗೌಡ ಅವರು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕಳೆದ 28 ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ಘಟಕದ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಲಿಂಗೇಗೌಡ ಪ್ರಸ್ತುತ ಉಪಾಧ್ಯಕ್ಷರಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.