ಮನೆ ರಾಜ್ಯ ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಆದೇಶ

ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಆದೇಶ

0

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಅವರನ್ನು‌ ‌ನೇಮಿಸಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಪ್ರೊ. ಶರತ್ ಅವರು ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ.

ಶರತ್ ಅನಂತಮೂರ್ತಿ ಅವರು ಮುಂದಿನ ನಾಲ್ಕು ವರ್ಷಗಳ ಕಾಲ ಕುಲಪತಿಯಾಗಿ ಮುಂದುವರೆಯಲಿದ್ದಾರೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಅವರ ಮಗ.