ಬೆಂಗಳೂರು : ದಕ್ಷಿಣ ಭಾರತದ ಮೊದಲ ವಿಜ್ಞಾನ ನಗರ (Science City) ಗೆ ಅಗತ್ಯವಿದ್ದ 25 ಏಕರೆ ಜಾಗವನ್ನು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ 2 ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಮಂಜೂರು ಮಾಡಲಾಗಿದೆ ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು. ದೇಶದಲ್ಲಿ ಪ್ರಸ್ತುತ 3 ವಿಜ್ಞಾನ ನಗರಗಳಿವೆ. ಅದರಲ್ಲಿ ಪ್ರಮುಖವಾಗಿರುವುದು ಕೋಲ್ಕತ್ತಾ ನಗರದಲ್ಲಿದೆ. ದಕ್ಷಿಣ ಭಾರತದಲ್ಲಿ ಬೆಂಗಳೂರು ಪ್ರಮುಖ ನಗರವಾಗಿದ್ದು, ಭಾರತೀಯ ವಿಜ್ಞಾನ ಮಂದಿರ, ಜೆ.ಎನ್.ಸಿ.ಎ.ಎಸ್.ಆರ್, ರಾಮನ್ ಸಂಶೋಧನಾ ಸಂಸ್ಥೆ, 400 ಕ್ಕೂ ಅಧಿಕ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯಗಳು, ಐಟಿ-ಬಿಟಿ ಪಾರ್ಕ್ ಗಳಿವೆ. ವಿಜ್ಞಾನ ನಗರ ಸ್ಥಾಪನೆಗೆ ಬೆಂಗಳೂರು ಸೂಕ್ತ ಎನ್ನುವ ಪ್ರಸ್ತಾವನೆಯನ್ನು ಆಗಸ್ಟ್ 3, 2023 ರಂದು ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಗಿತ್ತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಕೇಂದ್ರ ಸಚಿವರು ವಿಜ್ಞಾನ ನಗರ ಸ್ಥಾಪನೆಗೆ ಮೂಲಭೂತವಾಗಿ 25 ಏಕರೆ ಜಾಗದ ಅಗತ್ಯತೆಯನ್ನು ತಿಳಿಸಿದ್ದರು. ಸನ್ಮಾನ್ಯ ಮುಖ್ಯಮಂತ್ರಿಗಳು ತಮ್ಮ 2024-25 ನೇ ಆಯವ್ಯಯದಲ್ಲಿ ಈ ಬಗ್ಗೆ ಘೋಷಣೆ ಮಾಡಿ ಅಗತ್ಯ ಭೂಮಿಯನ್ನು ಒದಗಿಸುವುದಾಗಿ ಭರವಸೆಯನ್ನು ನೀಡಿದ್ದರು. ಈ ಭರವಸೆ ಹಾಗೂ ನಮ್ಮ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳ ಪ್ರಯತ್ನದಿಂದಾಗಿ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಜಾಗವನ್ನು ಗುರುತಿಸಲಾಗಿದೆ.
ಜಾಗದ ಲಭ್ಯತೆಯ ಬಗ್ಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ದಕ್ಷಿಣ ಭಾರತದಲ್ಲೆ ಮೊದಲ ಹಾಗೂ ಅತ್ತುತ್ತಮ ವಿಜ್ಞಾನ ನಗರ ಸ್ಥಾಪನೆ ಆಗಿಲಿದೆ ಎಂದು ಸಚಿವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.