ಮನೆ ರಾಜ್ಯ ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು 2,675 ಕೋಟಿ ರೂ. ಮಂಜೂರು

ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು 2,675 ಕೋಟಿ ರೂ. ಮಂಜೂರು

0

ನವದೆಹಲಿ: ಪಣಜಿ-ಹೈದರಾಬಾದ್ EC10 ಕಾರಿಡಾರ್​​ ಅಡಿಯಲ್ಲಿ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ 92.40 ಕಿಮೀ ಉದ್ದದ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ 2,675 ಕೋಟಿ ರೂ. ಮಂಜೂರು ಮಾಡಿದೆ. ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ಹೆದ್ದಾರಿ ಉನ್ನತೀಕರಿಸಲಾಗುತ್ತದೆ.

ಈ ಯೋಜನೆಯು ಪಣಜಿ-ಹೈದರಾಬಾದ್​ ಆರ್ಥಿಕ ಕಾರಿಡಾರ್​ನ ಅವಿಭಾಜ್ಯ ಅಂಗವಾಗಿದೆ. EC10 ಯೋಜನೆಯು ಪಣಜಿ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಗಳನ್ನು ಸಂಪರ್ಕಿಸುತ್ತದೆ. ಈ EC10 ಮೀನುಗಾರಿಗೆ ಮತ್ತು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಪಣಜಿ, ಆಹಾರ ಧ್ಯಾನಗಳು ಮತ್ತು ಹಾಲಿನ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ ಬೆಳಗಾವಿ, ಅಕ್ಕಿ, ಹತ್ತಿ, ಶೇಂಗಾ ಮತ್ತು ಬೇಳೆಕಾಳುಗಳಿಗೆ ಹೆಸರುವಾಸಿಯಾಗಿರುವ ರಾಯಚೂರು ಮತ್ತು ಐಟಿ, ಫಾರ್ಮ್​ ಮತ್ತು ಹೆಲ್ತಕೇರ್​ಗೆ ವಿಶಿಷ್ಟ ಸ್ಥಾನ ಪಡೆದಿರುವ ಹೈದರಾಬಾದ್​ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಳನ್ನು ಸಂಪರ್ಕಿಸುತ್ತದೆ.

ದೇಶದಲ್ಲಿ ರಸ್ತೆಗಳ ನಿರ್ಮಾಣವನ್ನು ವೇಗಗೊಳಿಸಲು ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ಖಾಸಗಿ-ಸಾರ್ವಜನಿಕ ಸಹಭಾಗಿತ್ವದ (PPP) ಅಡಿಯಲ್ಲಿ ರಸ್ತೆಗಳನ್ನು ನಿರ್ಮಾಣ ಮಾಡುತ್ತದೆ. ಯೋಜನಾ ವೆಚ್ಚದ 40 ಪ್ರತಿಶತ ಹಣವನ್ನು ಸರ್ಕಾರವು ರಸ್ತೆ ನಿರ್ಮಾಣದ ಅವಧಿಯಲ್ಲಿ ನೀಡುತ್ತದೆ. ಉಳಿದ 60 ಪ್ರತಿಶತದಷ್ಟು ಹಣವನ್ನು ಬಡ್ಡಿಯೊಂದಿಗೆ ರಸ್ತೆ ಕಾರ್ಯಾರಂಭವಾದ ಮೇಲೆ ನೀಡುತ್ತದೆ.