ಮನೆ ರಾಜ್ಯ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಅಭೂತಪೂರ್ವ...

160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಅಭೂತಪೂರ್ವ ಸನ್ಮಾನ

0

ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬಸವಕಲ್ಯಾಣದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿದರು

ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿಗಳಿಗೆ ಸನ್ಮಾನಿಸಲಾಯಿತು.

ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ ,  ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿ 160 ಮಂದಿ ಶರಣ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು.

ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150 ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹರಸಿದರು.

ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್ ಖಂಡ್ರೆ ಅವರು ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಿ.ಆರ್.ಪಾಟೀಲ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಡಾ. ಗೊ.ರು. ಚನ್ನಬಸಪ್ಪ, ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ ಜತ್ತಿ , ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಪೌರಾಡಳಿತ, ಹಜ್ ಸಚಿವರಾದ ರಹೀಖಾನ್, ಮಾಜಿ ಸಚಿವರಾದ ಶ್ರೀ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್, ವಿಜಯ್ ಸಿಂಗ್, ಶಾಸಕ ಚನ್ನಾರೆಡ್ಡಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ವಿಶ್ವಬಸವ ಧರ್ಮ ಟ್ರಸ್ಟ್‍ನ ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ವೈಭವದ ವೇದಿಕೆಯಲ್ಲಿ ಮುಖ್ಯಮಂತ್ರಿಗಳು ಸನ್ಮಾನಿಸಲ್ಪಟ್ಟರು.