ಮನೆ ರಾಜ್ಯ ಬ್ಯಾಡಗಿ ಮೆಣಸಿನಕಾಯಿ ಬೆಲೆ ಕುಸಿತ: ಕಾರಣ ತಿಳಿದು ವರದಿ ಸಲ್ಲಿಸಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ  

ಬ್ಯಾಡಗಿ ಮೆಣಸಿನಕಾಯಿ ಬೆಲೆ ಕುಸಿತ: ಕಾರಣ ತಿಳಿದು ವರದಿ ಸಲ್ಲಿಸಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ  

0

ಬೆಂಗಳೂರು : ಬ್ಯಾಡಗಿ ಮೆಣಸಿನಕಾಯಿ ಬೆಲೆ ಕುಸಿತಕ್ಕೆ ಕಾರಣವೇನೆಂದು ತಿಳಿದು, ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ. ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಗ್ನಿಶಾಮಕ ವಾಹನ ಸೇರಿದಂತೆ ಕನಿಷ್ಠ ಮೂರು ವಾಹನಗಳಿಗೆ ರೈತರು ಬೆಂಕಿ ಹಚ್ಚಿದ್ದಾರೆ. ಮತ್ತು ಎಪಿಎಂಸಿ ಕಚೇರಿಯಲ್ಲಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ವಾಹನವನ್ನು ಮಾರುಕಟ್ಟೆ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ ನಡೆದಿದೆ. ಕೆಲ ಹೊತ್ತಿನ ಬಳಿಕ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಏನಿದು ಘಟನೆ

ಮೆಣಸಿನಕಾಯಿ ಬೆಲೆ ದಿಢೀರ್ ಕುಸಿದಿರುವುದಕ್ಕೆ ಆಕ್ರೋಶಗೊಂಡ ರೈತರು ಹಾವೇರಿ ಜಿಲ್ಲೆಯ ಬ್ಯಾಡಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾರುಕಟ್ಟೆಯಲ್ಲಿನ 12ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.