ಮನೆ ರಾಷ್ಟ್ರೀಯ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

0

ಹೊಸದಿಲ್ಲಿ: ಹರ್ಯಾಣದಲ್ಲಿ ಮೈತ್ರಿಯಿಂದ ಸರ್ಕಾರ ನಡೆಸಿದ್ದ ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷ (ಜೆಜೆಪಿ) ನಡುವೆ ಇದೀಗ ಭಿನ್ನಾಭಿಪ್ರಾಯ ಉಂಟಾಗಿದ್ದು, ಮೈತ್ರಿ ಮುರಿದಿದೆ.

ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಇಂದು ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಹರಿಯಾಣದಲ್ಲಿ ಅದರ ಮೈತ್ರಿ ಪಾಲುದಾರ ಪಕ್ಷಗಳಾಗಿದ್ದ ಬಿಜೆಪಿ ಮತ್ತು ಜೆಜೆಪಿ ನಡುವೆ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಸೀಟು ಹಂಚಿಕೆಯ ಮಾತುಕತೆಗಳ ನಡುವೆ ಭಿನ್ನಾಭಿಪ್ರಾಯಗಳ ಉಂಟಾಗಿದೆ.

ಬಿಜೆಪಿಯು ಪಕ್ಷೇತರ ಅಭ್ಯರ್ಥಿಗಳ ಸಹಾಯದಿಂದ ಸರ್ಕಾರ ರಚಿಸಲಿದೆ ಎಂದು ವರದಿ ತಿಳಿಸಿದೆ.

ಜೆಜೆಪಿ ನಾಯಕ ದುಷ್ಯಂತ್ ಚೌಟೇಲಾ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಸೋಮವಾರ ಭೇಟಿಯಾಗಿ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದರು. ಇದಾದ ಬಳಿಕ ಈ ನಡೆ ಬಂದಿದೆ.

 “ನಾವು ಈಗಾಗಲೇ ಮುಖ್ಯಮಂತ್ರಿ ಮನೋಹರ್ ಲಾಲ್ ನೇತೃತ್ವದ ಸರ್ಕಾರಕ್ಕೆ ನಮ್ಮ ಬೆಂಬಲವನ್ನು ನೀಡಿದ್ದೇವೆ. ನಾವು ಲೋಕಸಭೆ ಚುನಾವಣೆಯ ಕಾರ್ಯತಂತ್ರದ ಬಗ್ಗೆಯೂ ಚರ್ಚಿಸಿದ್ದೇವೆ” ಎಂದು ಹರಿಯಾಣದ ಸ್ವತಂತ್ರ ಶಾಸಕ ನಯನ್ ರಾವತ್ ಹೇಳಿದ್ದಾರೆ.

2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. 90 ಸೀಟುಗಳ ವಿಧಾನಸಭೆಯಲ್ಲಿ ಮ್ಯಾಜಿಕ್ ಸಂಖ್ಯೆ 46 ಆಗಿದೆ. ಹತ್ತು ಕ್ಷೇತ್ರಗಳಲ್ಲಿ ಜಯ ಗಳಿಸಿದ್ದ ಜೆಜೆಪಿ ಜತೆ ಸೇರಿ ಬಿಜೆಪಿ ಸರ್ಕಾರ ರಚಿಸಿತ್ತು. ಏಳು ಮಂದಿ ಪಕ್ಷೇತರರು ಬಿಜೆಪಿ ಬೆಂಬಲಕ್ಕೆ ಇದ್ದಾರೆ.