ಮನೆ ಅಪರಾಧ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾದ ಕಬ್ಬು ತುಂಬಿದ ಲಾರಿ: ಸ್ಥಳದಲ್ಲೇ ಮೂವರ ಸಾವು

ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾದ ಕಬ್ಬು ತುಂಬಿದ ಲಾರಿ: ಸ್ಥಳದಲ್ಲೇ ಮೂವರ ಸಾವು

0

ಚಾಮರಾಜನಗರ: ಕಬ್ಬು ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಅಸುನೀಗಿರುವ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ‌ ದಿಂಬಂ ಘಾಟ್​ ನಲ್ಲಿ ನಡೆದಿದೆ.

ತಾಳವಾಡಿಯಿಂದ ಸತ್ಯಮಂಗಲಂನತ್ತ ಕಬ್ಬು ತುಂಬಿಕೊಂಡು ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ದಿಂಬಂನ 27ನೇ ತಿರುವಿನಲ್ಲಿ ಕಾರಿನ ಮೇಲೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಐವರಲ್ಲಿ ಮೂವರು ಅಸುನೀಗಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸತ್ಯಮಂಗಲಂ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಧಿಕ ಭಾರ ಹೊಂದಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ತಮಿಳುನಾಡಿನ ಆಸನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಅಪಘಾತದಲ್ಲಿ ಲಾರಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.