ಚಾಮರಾಜನಗರ: ರಾಜ್ಯದ ಗಮನ ಸೆಳೆದಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಸಂಸದ ಪ್ರತಾಪ್ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಈ ನಡುವೆ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಡುವಿನ ಹೊಂದಾಣಿಕೆ ರಾಜಕಾರಣ ಎಂಬ ಆರೋಪಗಳು ವ್ಯಕ್ತವಾಗಿವೆ. ಇದಕ್ಕೆ ಇದೀಗ ಸ್ವತಃ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಚಾಮರಾಜನಗರದ ಹೆಗ್ಗವಾಡಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಯಾವನೋ ಒಬ್ಬ ದಾರಿಯಲ್ಲಿ ಹೋಗುವವರು ಹೇಳಿದ್ರೆ ಆಗಲ್ಲ. ಈಗ ಪ್ರತಾಪ್ ಸಿಂಹ ಅವರಿಗೆ ಬಿಜೆಪಿಯವರು ಟಿಕೆಟ್ ನಿರಾಕರಿಸಿದ್ದಾರಲ್ಲಾ ಯಾಕೆ? ನಾನು ಹೊಂದಾಣಿಕೆ ಮಾಡಿದ್ನಾ? ಯದುವೀರ್ ಒಡೆಯರ್ ಅವರಿಗೆ ನಾನು ಬಿಜೆಪಿಗೆ ಹೋಗಿ ನಿಲ್ಲು ಅಂತ ಹೇಳಿದ್ನಾ? ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆ ಅಂತ ಅವರಿಗೆ ಟಿಕೆಟ್ ಕೊಡ್ತಿಲ್ಲ ಅನ್ಸುತ್ತೆ. ಅದನ್ನು ಬಿಟ್ಟು ನೀವೇ ಸೃಷ್ಟಿ ಮಾಡಿ ಹೊಂದಾಣಿಕೆ ರಾಜಕೀಯ ಅಂತ ಹೇಳಿದ್ರೆ ಹೇಗೆ ಎಂದು ಪ್ರಶ್ನಿಸಿದರು.
ನನಗೆ ಟಿಕೆಟ್ ಕೊಟ್ರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಪ್ರತಾಪ್ ಸಿಂಹ ಹೇಳಿಕೆಗೆ ಲೇವಡಿಯ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಓಹ್… ಪ್ರತಾಪ್ ಸಿಂಹ ಎರಡು ಸಲ ಎಂಪಿ ಆಗಿದ್ದ ಅಲ್ವಾ? ಯಾಕೆ ನನ್ನ ಕುರ್ಚಿ ಅಲುಗಾಡಲಿಲ್ಲ.? ನಮಗೆ ಬಿಜೆಪಿ ಯಾರನ್ನ ಅಭ್ಯರ್ಥಿ ಮಾಡ್ತಾರೆ ಎನ್ನುವ ಪ್ರಶ್ನೆ ಇಲ್ಲವೇ ಇಲ್ಲ. ನಾವು ಬಿಜೆಪಿಯನ್ನು ಸೋಲಿಸಬೇಕು ಅಷ್ಟೇ. ಎಂದ ಅವರು, ನಾವು ಕಾಂಗ್ರೆಸ್ ಬಡವರ ಪರ ನೀಡಿರುವ ಅಭಿವೃದ್ಧಿಗಳ ಮೇಲೆ ಅವಲಂಬನೆ ಆಗಿದ್ದೇವೆ ಹೊರತು ಬಿಜೆಪಿ ಅಭ್ಯರ್ಥಿ ಮೇಲೆ ಅಲ್ಲ. ನಾವು ಬಿಜೆಪಿ ನ ಸೋಲಿಸುತ್ತೇವೆ ಅಷ್ಟೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.