ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಸ್ ಎಸ್ ಎಲ್ ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಆದೇಶವನ್ನು ಹಿಂಪಡೆದಿದೆ.
ಬುಧವಾರ ಹೊರಡಿಸಿರುವ ಪರಿಷ್ಕೃತ ಆದೇಶದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ ನೀಡಿ ಎಸ್ಎಸ್ಎಲ್ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವಂತೆ ಎಲ್ಲ ಜಿಲ್ಲೆಗಳ ಉಪನಿರ್ದೇಶಕರಿಗೆ ಮಂಡಳಿ ತಿಳಿಸಿತ್ತು. ಪುಟ್ಟಣ್ಣ, ಮರಿತಿಬ್ಬೇಗೌಡ ಸೇರಿದಂತೆ ವಿವಿಧ ಶಾಸಕರು ಹಾಗೂ ಶಿಕ್ಷಕ ಸಮುದಾಯ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಕೆಎಸ್ ಇಎಬಿ ಪರಿಷ್ಕೃತ ಆದೇಶ ಹೊರಡಿಸಿದೆ.
ಅವ್ಯವಹಾರ ತಪ್ಪಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಈ ಬಾರಿ ಪ್ರೌಢಶಾಲಾ ಶಿಕ್ಷಕರನ್ನು ಕೊಠಡಿ ಪರಿವೀಕ್ಷಕರನ್ನಾಗಿ ಮಾಡದಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿತ್ತು. ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿರುವ ಕ್ಲಸ್ಟರ್ ಹೊರತಾದ ಕೇಂದ್ರಗಳಿಗೆ ಕೊಠಡಿ ಮೇಲ್ವಿಚಾರಕರಾಗಿ ಹಾಗೂ ಪರೀಕ್ಷೆಯ ಇತರೆ ಕಾರ್ಯಗಳಿಗೆ ನಿಯೋಜಿಸಬೇಕು. ಆಯಾ ವಿಷಯಗಳ ಶಿಕ್ಷಕರನ್ನು ಅದೇ ವಿಷಯದ ದಿನ ಪರೀಕ್ಷಾ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ಸೂಚಿಸಿತ್ತು.
ಆದರೆ ಈಗ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಸ್ಎಸ್ಎಲ್ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಆದೇಶವನ್ನು ಹಿಂಪಡೆದಿದೆ.
ಈ ಹಿಂದೆ 2023ರ ಮಾರ್ಚ್–ಏಪ್ರಿಲ್ ನಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಆರೋಪದ ಮೇಲೆ 38 ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಹಾಗಾಗಿ, 2024ರ ಪರೀಕ್ಷೆಯಲ್ಲಿ ನಕಲು, ವ್ಯವಹಾರಕ್ಕೆ ಸಂಪೂರ್ಣ ಕಡಿವಾಣ ಹಾಕಲು ಪರೀಕ್ಷಾ ಕಾರ್ಯಕ್ಕೆ ಪ್ರೌಢಶಾಲಾ ಸಹ ಶಿಕ್ಷಕರ ಬದಲು ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಲು ಸುತ್ತೋಲೆ ಹೊರಡಿಸಲಾಗಿತ್ತು. ಈ ಕ್ರಮಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರದ ಕ್ರಮ ಸರಿ ಇಲ್ಲ. ಮರುಪರಿಶೀಲಿಸಬೇಕು ಎಂದು ವಿಧಾನಪರಿಷತ್ತಿನ ಸದಸ್ಯರಾದ ಪುಟ್ಟಣ್ಣ ಹಾಗೂ ಮರಿತಿಬ್ಬೇಗೌಡ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.