ಬೆಂಗಳೂರು: ಯಲಹಂಕ ನಾಗೇನಹಳ್ಳಿ ಬಳಿ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿದ್ದಾರೆ.
ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಜಯದೇವ್ (25) ಮೃತ ಯುವಕ.
ಕೆಲಸ ಮುಗಿಸಿಕೊಂಡು ರಾತ್ರಿ ನಾಗೇನಹಳ್ಳಿಯ ಶೆಲ್ ಪೆಟ್ರೋಲ್ ಬಂಕ್ ಮುಂಭಾಗ ಬೈಕ್ ನಲ್ಲಿ ಜಯದೇವ್ ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಇವರ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಜಯದೇವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯಲಹಂಕ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Saval TV on YouTube