ನೋಯ್ಡಾ: ವಿದ್ಯಾರ್ಥಿನಿಯೊಬ್ಬಳು 18ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
ಬಿಸಾರ್ಖ್ ಪೊಲೀಸ್ ಠಾಣೆ ವ್ಯಾಪ್ತಿಯ ಹಿಮಾಲಯ ಪ್ರೈಡ್ ಸೊಸೈಟಿಯಲ್ಲಿ 12 ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಬಾಲ್ಕನಿಯಲ್ಲಿ ಗಿಡಗಳಿಗೆ ನೀರು ಹಾಕುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ತಿಳಿಸಿದಾಗ, ಸ್ಥಳೀಯ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಿತು ಎಂದು ವಕ್ತಾರರು ತಿಳಿಸಿದ್ದಾರೆ.