ದೆಹಲಿ: ಭಾರತೀಯ ಚುನಾವಣಾ ಆಯೋಗ ಇಂದು (ಶನಿವಾರ) 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ.
7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತದಲ್ಲಿ ಮತದಾನ ನಡೆಯಲಿದೆ.ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.
ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ
ಮೇ 13 ರಂದು ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಏಪ್ರಿಲ್ 19 ರಂದು ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೊದಲು ಚುನಾವಣಾ ಸಿದ್ಧತೆಯ ಬಗ್ಗೆ ಮಾತನಾಡಿದ್ದಾರೆ. ತಮ್ಮ ಮಾತುಗಳನ್ನು ಆರಂಭಿಸಿದ ಕುಮಾರ್, ಚುನಾವಣೆಗಳು ಒಂದು ರೀತಿಯ ಹಬ್ಬವಾಗಿರುವ ಭಾರತದತ್ತ ಎಲ್ಲರ ಕಣ್ಣು ನೆಟ್ಟಿದೆ. ನಿಜವಾದ ಹಬ್ಬದ ಪ್ರಜಾಸತ್ತಾತ್ಮಕ ವಾತಾವರಣದಲ್ಲಿ ಚುನಾವಣೆ ನಡೆಸುವುದಾಗಿ ನಾವು ಭರವಸೆ ನೀಡುತ್ತೇವೆ. ಪ್ರತಿ ಚುನಾವಣೆಯು ಹೊಸ ಪರೀಕ್ಷೆಯಾಗಿದೆ, ಇಡೀ ಕಾರ್ಯವ್ಯವಸ್ಥೆ ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲಾಗಿದೆ ಎಂದಿದ್ದಾರೆ ಅವರು.
ನಮ್ಮ ತಂಡ ಈಗ ಪೂರ್ಣಗೊಂಡಿದೆ, ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ.ವಿಶ್ವ ವೇದಿಕೆಯಲ್ಲಿ ಭಾರತದ ಖ್ಯಾತಿ ಹೆಚ್ಚಿಸುವ ರೀತಿಯಲ್ಲಿ ರಾಷ್ಟ್ರೀಯ ಚುನಾವಣೆಯನ್ನು ನೀಡುವುದು ನಮ್ಮ ಭರವಸೆ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ
ನಮ್ಮಲ್ಲಿ 97 ಕೋಟಿ ನೋಂದಾಯಿತ ಮತದಾರರಿದ್ದಾರೆ, 10.5 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳು ಇವೆ. 1.5 ಕೋಟಿ ಸಿಬ್ಬಂದಿ, 55 ಲಕ್ಷ ಇವಿಎಂಗಳಿಂದ ಚುನಾವಣೆ ನಿರ್ವಹಿಸಲ್ಪಡುತ್ತವೆ ಎಂದು ಕುಮಾರ್ ಹೇಳಿದ್ದಾರೆ.
ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರು ಇದ್ದಾರೆ. 1.8 ಕೋಟಿ ಮತದಾರರಿಂದ ಮೊದಲ ಬಾರಿಗೆ ಮತ ಚಲಾವಣೆ ಮಾಡಲಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತ ಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ.ದೇಶದಾದ್ಯಂತ 10.5 ಲಕ್ಷ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ.ಮತದಾನಕ್ಕೆ ಒಟ್ಟು 55 ಲಕ್ಷ ವಿದ್ಯುನ್ಮಾನ ಮತಯಂತ್ರಗಳ ಬಳಕೆಯಾಗಲಿದೆ. ಚುನಾವಣಾ ಕರ್ತವ್ಯಕ್ಕಾಗಿ ಒಂದೂವರೆ ಕೋಟಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ. 12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳೆಯ ಸಂಖ್ಯೆ ಹೆಚ್ಚು ಇದೆ. ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ವ್ಹೀಲ್ಚೇರ್ ಹೆಲ್ಪ್ಡೆಸ್ಕ್, ವಿದ್ಯುತ್ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ.
17 ನೇ ಲೋಕಸಭೆಯ ಅವಧಿಯು 16 ನೇ ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಗಳ ಅವಧಿಯು ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಕುಮಾರ್ ಹೇಳಿದ್ದಾರೆ.
ಯಾವುದೇ ಬಲ ಅಥವಾ ಹಣದ ಶಕ್ತಿಯನ್ನು ಬಳಸಲಾಗುವುದಿಲ್ಲ, ಯಾವುದೇ ತಪ್ಪು ಮಾಹಿತಿ ಹರಡುವುದಿಲ್ಲ. MCC ಯ ಯಾವುದೇ ಉಲ್ಲಂಘನೆಗಳು ನಡೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಶ್ರಮಿಸುತ್ತದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವಲ್ಲಿ ಬೆದರಿಸುವ ಸವಾಲುಗಳು ನಾಲ್ಕು ಪಟ್ಟು, 4Ms: Muscle, Money, misinformation ಮತ್ತು MCC ಉಲ್ಲಂಘನೆ ಎಂದು ಸಿಇಸಿ ರಾಜೀವ್ ಕುಮಾರ್ ಹೇಳಿದ್ದಾರೆ.
2.18 ಲಕ್ಷ ಶತಾಯುಷಿಗಳು
ಒಟ್ಟು 2.18 ಲಕ್ಷ ಶತಾಯುಷಿಗಳು ಮತ ಚಲಾಯಿಸಲಿದ್ದಾರೆ. 20-29 ವರ್ಷದ 19.47 ಕೋಟಿ ಮತದಾರರು ಹಕ್ಕು ಚಲಾಯಿಸುತ್ತಾರೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಆ್ಯಪ್ ಮೂಲಕ ತಮ್ಮ ಅಭ್ಯರ್ಥಿಗಳ ಮಾಹಿತಿ ಲಭ್ಯವಿದೆ. ಅಭ್ಯರ್ಥಿಗಳ ಅಪರಾಧ ಪ್ರಕರಣದ ವಿವರ ಆ್ಯಪ್ನಲ್ಲಿ ಲಭ್ಯವಿದೆ.ಮತದಾರರು ಚುನಾವಣಾ ಅಕ್ರಮ ಬಯಲು ಮಾಡಬಹುದು. ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು. ಚುನಾವಣಾ ಅಕ್ರಮವೆಗುವ ಅಭ್ಯರ್ಥಿಗಳ ವಿರುದ್ಧ ಕೂಡಲೇ ಕ್ರಮಗೊಳ್ಳುತ್ತೇವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.