ಮನೆ ಅಪರಾಧ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ:  7 ಮಂದಿ ಸಾವು

ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ:  7 ಮಂದಿ ಸಾವು

0

ಬಿಹಾರ: ಮದುವೆ ಸಮಾರಂಭ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ರವಿವಾರ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದುವೆ ಸಮಾರಂಭ ಮುಗಿಸಿದ ಹಿಂತಿರುಗುತ್ತಿದ್ದ ತಂಡ ಬಿಹಾರದ ಖಗಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಬರುತ್ತಿದ್ದ ವೇಳೆ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.