ಮನೆ ರಾಜ್ಯ ಬೆಂಗಳೂರು: ಶಾಲೆಯ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆ

ಬೆಂಗಳೂರು: ಶಾಲೆಯ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆ

0

ಬೆಂಗಳೂರು: ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ.

 ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ.

ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.