ಮನೆ ರಾಷ್ಟ್ರೀಯ ಲೋಕಸಭಾ ಚುನಾವಣೆ: 16 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ

ಲೋಕಸಭಾ ಚುನಾವಣೆ: 16 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ

0

ಚೆನ್ನೈ:  ತಮಿಳುನಾಡಿನಲ್ಲಿ ಏಪ್ರಿಲ್ 19ರಂದು ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ಎಐಎಡಿಎಂಕೆ ಬುಧವಾರ 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಮಾಜಿ ಸಂಸದ ಜಯವರ್ಧನ್, ಮಾಜಿ ಶಾಸಕ ಸರವಣ್‌ ಸೇರಿದಂತೆ ಪಕ್ಷದ ಹಿರಿಯ ನಾಯಕರ ಹೆಸರುಗಳು ಸೇರಿವೆ.

ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19ರಂದು ಚುನಾವಣೆ ನಡೆಯಲಿದೆ.