ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ 402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.
ಮೇ 8 ರಂದು ನಿಗದಿಯಾಗಿದ್ದ ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಲ್ಲದೆ, ಶೀಘ್ರದಲ್ಲೇ ಮುಂದಿನ ದಿನಾಂಕವನ್ನು ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.
2021ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಹುದ್ದೆಗಳು ಇವಾಗಿದ್ದು, ಮೇ 8 ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಈ ವೇಳಾಪಟ್ಟಿಗೆ ಯಾವುದೇ ಆಕ್ಷೇಪಣೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳು ಎದುರಾಗದಿದ್ದಲ್ಲಿ ಇದೇ ದಿನಾಂಕದಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.
ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಒಟ್ಟು ಎರಡು ರೀತಿಯ ಪ್ರಶ್ನೆ ಪತ್ರಿಕೆಗಳು ಇರಲಿವೆ. ಮೊದಲ ಪತ್ರಿಕೆ ಪ್ರಬಂಧ, ಸಾರಂಶ, ಭಾಷಾಂತರ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಎರಡನೇ ಪತ್ರಿಕೆಯು ವಸ್ತುನಿಷ್ಟ ಮಾದರಿಯದಾಗಿದ್ದು, ಬಹುವಿಧ ಆಯ್ಕೆ ಉತ್ತರಗಳ ಲಿಖಿತ ಪರೀಕ್ಷೆ ಇರುತ್ತದೆ. ಎರಡೂ ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಇರಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.