ಮನೆ ಸುದ್ದಿ ಜಾಲ ಟ್ಯಾಂಕರ್ ಪಲ್ಟಿ: ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ

ಟ್ಯಾಂಕರ್ ಪಲ್ಟಿ: ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ

0

ರಾಯಚೂರು(Raichuru): ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದು, ಸೋರಿಕೆಯಾಗುತ್ತಿದ್ದ ಪೆಟ್ರೋಲ್ ತುಂಬಿಕೊಳ್ಳಲು ಸುತ್ತಮುತ್ತಲಿನ ಜನರು ಮುಗಿಬಿದ್ದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಚಿಕ್ಕಹೊನ್ನಕುಣಿ ಗ್ರಾಮದಲ್ಲಿ ನಡೆದಿದೆ.

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಜನರನ್ನು ತಡೆಯಲು ಪ್ರಯತ್ನಿಸಿದರು. ಆದರೆ ಸಿಬ್ಬಂದಿ ಮಾತು ಕೇಳದ ಜನರು ವಾಟರ್ ಬಾಟಲ್, ಬಕೆಟ್, ಕೊಡಗಳಲ್ಲಿ ಪೆಟ್ರೋಲ್ ತುಂಬಿಕೊಂಡರು. ಪೊಲೀಸರು ಭೇಟಿ ನೀಡಿ, ಜನರನ್ನು ಚದುರಿಸಿದರು.

ಟ್ಯಾಂಕರ್ ರಾಯಚೂರಿನಿಂದ ಹುಣಸಿಗಿ ಮಾರ್ಗವಾಗಿ ಹೋಗುತ್ತಿದ್ದಾಗ ಪಲ್ಟಿಯಾಗಿದೆ. ಗಾಯಾಳು ಚಾಲಕನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.