ಹುಣಸೂರು: ತಾಲೂಕಿನ ಹನಗೋಡಿನಲ್ಲಿ ಮತ್ತೆ ಹುಲಿ ಹೆಜ್ಜೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಹನಗೋಡು ಗ್ರಾಮದ ತಾ.ಪಂ.ಮಾಜಿ ಸದಸ್ಯ ಎಚ್.ಆರ್.ರಮೇಶ್‌ಗೆ ಸೇರಿದ ತೋಟದಲ್ಲಿ ಕಳೆದ ಎರಡು ದಿನಗಳಿಂದ ಕಾಣಿಸಿಕೊಂಡಿದ್ದ ಹುಲಿ ಕುರುಹಾಗಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಹುಲಿಯು ಕಾಡು ಹಂದಿಯೊಂದಿಗೆ ಕಾದಾಡಿ ಭೇಟೆ ಮಾಡಿರುವ ಕುರುಹು ಸ್ಥಳದಲ್ಲಿದೆ.
ಲಕ್ಷ್ಮಣತೀರ್ಥ ನದಿಯ ಏರಿಯಲ್ಲಿ ಸಾಕಷ್ಟು ಪೊದೆಗಳಿವೆ. ಅಲ್ಲದೆ ಸಾಕಷ್ಟು ಗಿಡ-ಗುಂಟೆಗಳು ಬೆಳೆದಿದ್ದು, ಇದು ಹುಲಿ-ಚಿರತೆ ವಾಸಕ್ಕೆ ಪ್ರಶಸ್ತ ಸ್ಥಳವಾಗಿದೆ. ಇದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಹನಗೋಡಿನ ಸುಮಾರು ಹತ್ತು ಕಿ.ಮೀ. ಸುತ್ತ ಮುತ್ತಲಲ್ಲಿ ಹುಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದೆ. ಅಲ್ಲದೆ ಹತ್ತಾರು ಜಾನುವಾರುಗಳನ್ನು ಬಲಿ ಪಡೆದಿದೆ. ಕಳೆದ ಆರು ತಿಂಗಳ ಹಿಂದೆ ಒಮ್ಮೆಲೆ ಎರಡು ಹಸುಗಳ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ಘಟನೆ ವೇಳೆ ಶೆಟ್ಟಳ್ಳಿ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ನಡೆಸಿದ್ದರೂ ಹುಲಿ ಪತ್ತೆಯಾಗದಿದ್ದರೂ ಆಗಾಗ್ಗೆ ಅಲ್ಲಲ್ಲಿ ಕಾಣಿಸಿಕೊಂಡು ತನ್ನ ಇರುವಿಕೆಯನ್ನು ಸಾಬೀತುಪಡಿಸುತ್ತಲೇ ಇದೆ.
ಹೀಗಾಗಿ ಗ್ರಾಮಸ್ಥರು ಜಮೀನಿಗೆ ತೆರಳಲು ಹೆದರುವಂತಾಗಿದೆ. ಹೇಗಾದರೂ ಸರಿ ಯಾವುದೇ ಪ್ರಾಣ ಹಾನಿಗೂ ಮೊದಲೇ ಮುನ್ನೆಚ್ಚರಿಕೆಯಾಗಿ ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕ್ಯಾಮರಾ ಅಳವಡಿಕೆ;
ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಸೀಮಾ, ವಲಯ ಅರಣ್ಯಾಧಿಕಾರಿ ನಂದಕುಮಾರ್ ಹೆಜ್ಜೆ ಕಾಣಿಸಿಕೊಂಡಿರುವ ಸುತ್ತ ಕೂಂಬಿಂಗ್ ನಡೆಸುವುದು, ಕ್ಯಾಮರಾ ಅಳವಡಿಸಿ ಹುಲಿ ಪತ್ತೆಗೆ ಕ್ರಮವಹಿಸಲಾಗುವುದೆಂದು ಮಾಹಿತಿ ನೀಡಿದರು.
ಇದೀಗ ಹುಲಿ ಹೆಜ್ಜೆ ಪತ್ತೆಯಾಗಿರುವ ಸ್ಥಳಕ್ಕೆ ಡಿ.ಆರ್.ಎಫ್.ಓ ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ಭೇಟಿ ಇತ್ತು ಕ್ಯಾಮರಾ ಅಳವಡಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.