ಮನೆ ರಾಜ್ಯ ಹೊಸಪೇಟೆ: ಕಲುಷಿತ ನೀರು ಸೇವಿಸಿ 18 ಜನರು ಅಸ್ವಸ್ಥ

ಹೊಸಪೇಟೆ: ಕಲುಷಿತ ನೀರು ಸೇವಿಸಿ 18 ಜನರು ಅಸ್ವಸ್ಥ

0

ವಿಜಯನಗರ: ಕಲುಷಿತ ನೀರು ಸೇವಿಸಿ ಹೊಸಪೇಟೆ ತಾಲೂಕಿನ ನಲ್ಲಾಪುರದ 18 ಜನರು ಅಸ್ವಸ್ಥಗೊಂಡಿದ್ದಾರೆ.

ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಉಳಿದವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಪೈಪ್​ಲೈನ್​ ಮೂಲಕ ಕಲುಷಿತ ನೀರು ಪೂರೈಕೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮಕ್ಕೆ ಜಿಲ್ಲಾ ಪಂಚಾಯತ್​ ಸಿಇಒ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಶಂಕರ್ ನಾಯ್ಕ್ ಭೇಟಿ ನೀಡಿ, ನೀರಿನ ಸ್ಯಾಂಪಲ್ ಪಡೆದು ಪರಿಶೀಲನೆಗೆ ಕಳುಹಿಸಿದರು.