ಮನೆ ರಾಜ್ಯ ಮಂಡ್ಯ: ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವು, ಮತ್ತೋರ್ವನಿಗೆ ಗಾಯ

ಮಂಡ್ಯ: ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವು, ಮತ್ತೋರ್ವನಿಗೆ ಗಾಯ

0

ಮಂಡ್ಯ: ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ತಮಿಳುನಾಡು ಮೂಲದ ರಮೇಶ್ (67) ಮೃತ ದುರ್ದೈವಿ.

ನಾಗಲಿಂಗ ಎನ್ನುವಾತನಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು. ನಿನ್ನೆ ರಾತ್ರಿ ಗ್ರಾಮದಲ್ಲಿ ಅದ್ದೂರಿಯಾಗಿ ಹಬ್ಬ ನೆರವೇರಿದೆ. ಬಳಿಕ ಗ್ರಾಮದ ಆಲೆಮನೆಯೊಂದರಲ್ಲಿ ನಾಲ್ವರು ತಂಗಿದ್ದರು. ಆದ್ರೆ, ಇಂದು(ಮಾರ್ಚ್ 25) ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳ ತುಂಬುವಾಗ ಸ್ಪೋಟ ಸಂಭವಿಸಿದೆ.

ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿದ್ದು, ಆಲೆಮನೆ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇನ್ನು ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್, ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.