ಬೆಂಗಳೂರು(Bengaluru): ನಿಗದಿತ ವೇಳಾಪಟ್ಟಿಯಂತೆಯೇ ರಾಜ್ಯದಲ್ಲಿ ಮೇ 16ರಿಂದ ‘ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ಕೋವಿಡ್ ಕಾರಣ 2 ವರ್ಷಗಳಿಂದ ಉಂಟಾಗಿರುವ ಕಲಿಕಾ ಹಿನ್ನಡೆಯಲ್ಲಿ ಸರಿದೂಗಿಸಲು ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇತರ ರಾಜ್ಯಗಳಿಗೂ ಕರ್ನಾಟಕದ ಯೋಜನೆ ಮಾದರಿಯಾಗಿದೆ ಎಂದರು.
ಕಲಿಕಾ ಚೇತರಿಕೆ ಯೋಜನೆಯು ವರ್ಷವಿಡೀ ನಡೆಯಲಿದೆ. ಈ ಹಿನ್ನೆಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.