ಮನೆ ಸ್ಥಳೀಯ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

0

ಮೈಸೂರು: ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ರೇಡಿಯೋ ಕಾರ್ಯಕ್ರಮ ನಿಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.

ರಾಜರ ಬಾಯಿಂದ ರಾಜರ ಕಥೆಗಳು ಹೆಸರಿನಲ್ಲಿ ಪ್ರಸಾರವಾಗುತ್ತಿರುವ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸುವಂತೆ ಕರ್ನಾಟಕ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ವಕ್ತಾರ ಹೆಚ್​.ಎ.ವೆಂಕಟೇಶ್ ದೂರು ನೀಡಿದ್ದಾರೆ.

104.8 ರೇಡಿಯೋ ಮಿರ್ಚಿಯಲ್ಲಿ ಯದುವೀರ್ ಅವರ ರಾಜರ ಬಾಯಿಂದ ರಾಜರ ಕಥೆಗಳು ಹೆಸರಿನಲ್ಲಿ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಯದುವೀರ್ ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಹಿನ್ನೆಲೆ ನಿರ್ಬಂಧನೆ ವಿಧಿಸಿ. ರೇಡಿಯೋದಲ್ಲಿ ಪ್ರಸಾರವಾಗುತ್ತಿರುವ ಕಾರ್ಯಕ್ರಮದ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತು ಹಾಕಲಾಗುತ್ತಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಯದುವೀರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ಚುನಾವಣಾ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಹೆಚ್​.ಎ.ವೆಂಕಟೇಶ್ ಮನವಿ ಮಾಡಿದ್ದಾರೆ.