ಮನೆ ಸ್ಥಳೀಯ ಲೋಕಸಭಾ ಚುನಾವಣೆ: ಸಿಬ್ಬಂದಿಗಳಿಗೆ ತರಬೇತಿ

ಲೋಕಸಭಾ ಚುನಾವಣೆ: ಸಿಬ್ಬಂದಿಗಳಿಗೆ ತರಬೇತಿ

0

ಮೈಸೂರು: ಹುಣಸೂರಿನ ಅಂಬೇಡ್ಕರ್ ಭವನದಲ್ಲಿ ಇಂದು  ಲೋಕಸಭಾ ಚುನಾವಣಾ ಸಂಬಂಧ ಮಾದರಿ ನೀತಿ ಸಂಹಿತೆ ಅನುಷ್ಠಾನ ಕುರಿತಂತೆ ಜಿಲ್ಲೆಯ FST, SST VST ಮತ್ತು VV ಸದರಿ ತರಬೇತಿಗೆ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ  ತಹಶೀಲ್ದಾರ್‌ಗಳಿಗೆ, ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಎಫ್‌ಸಿಟಿ, ಎಸ್‌ಎಸ್‌ಟಿ, ವಿವಿಟಿ ತಂಡದ ಮುಖ್ಯಸ್ಥರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿಗೆ ತರಬೇತಿ ನಡೆಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯಿತ್ರಿ ಅವರು ಮಾತನಾ‌ಡಿ, ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಕರ್ತವ್ಯಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭಗಳಿಗೆ ಕಡ್ಡಾಯ ಅನುಮತಿ ಹಾಗೂ ವೆಚ್ಚ ನಿರ್ವಹಣೆಗಳ ಬಗ್ಗೆ ನಿಗಾ ವಹಿಸಿ. ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ಪೋಸ್ಟ್‌ಗಳಿಗೆ ಎಸ್‌ಎಸ್‌ಟಿ ತಂಡವನ್ನು ಈಗಾಗಲೇ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿ ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಮತ್ತು ಅನುಷ್ಠಾನ ಮಾಸ್ಟರ್ ಟ್ರೈನರ್ ಸತೀಶ್, ಮಾದರಿ ನೀತಿ ಸಂಹಿತೆ ನೋಡೆಲ್ ಅಧಿಕಾರಿಗಳಾದ ರುದ್ರೇಶ್, ನಂದೀಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.