ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ’ ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬಿಡುಗಡೆಯಾಗಿದೆ.
ಅದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಹಾಗೂ ಶ್ರೀ ಪ್ರಸನ್ನನಾಥ ಸ್ವಾಮೀಜಿ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಕೋರಿದರು.
ಈ ಚಿತ್ರಕ್ಕೆ ಈಗಾಗಲೇ ಬೆಂಗಳೂರು ಸುತ್ತಮುತ್ತ ಎರಡು ಹಂತಗಳ ಚಿತ್ರೀಕರಣ ನಡೆದಿದೆ. ಈ ಭಾಗದಲ್ಲಿ ಮಾತಿನ ಭಾಗದ ಚಿತ್ರೀಕರಣ ಹಾಗೂ ವಿಕ್ರಂ ಮೋರ್, ಯುವ ಖ್ಯಾತಿಯ ಅರ್ಜುನ್ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ.
ಆರ್.ಎಸ್. ಮೋಹನ್ ಕುಮಾರ್ ಹಾಗೂ ಆರ್. ಅಚ್ಯುತ್ ರಾವ್ ಅವರ ನಿರ್ಮಾಣದಲ್ಲಿ ಈ ಚಿತ್ರ ತಯಾರಾಗುತ್ತಿದೆ. ಬ್ರಹ್ಮ ಈ ಚಿತ್ರದ ನಿರ್ದೇಶಕರು. ವಿಐಪಿ ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶರ್ಮ ಅಭಿನಯಿಸುತ್ತಿದ್ದಾರೆ.
ಸುನೀಲ್ ಪುರಾಣಿಕ್, ಬಲ ರಾಜವಾಡಿ , ಸ್ಪರ್ಶ ರೇಖಾ, ಸುಚೇಂದ್ರ ಪ್ರಸಾದ್ , ಹನುಮಂತೇಗೌಡ, ರಾಮ್ ಕಶ್ಯಪ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ರಾಜೀವ್ ಗಣೇಸನ್ ಛಾಯಾಗ್ರಹಣ, ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಸತೀಶ್ ಚಂದ್ರಯ್ಯ ಸಂಕಲನ ಈ ಚಿತ್ರಕ್ಕಿದೆ.















