ಮನೆ ರಾಜ್ಯ ರಾಜ್ಯದಲ್ಲಿ 156 ಮಂದಿಗೆ ಕೊರೊನಾ ಸೋಂಕು

ರಾಜ್ಯದಲ್ಲಿ 156 ಮಂದಿಗೆ ಕೊರೊನಾ ಸೋಂಕು

0

ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 156 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,49,446ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40063 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
179 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,07480ಕ್ಕೆ ಏರಿಕೆಯಾಗಿದೆ. ಇನ್ನು 1861 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 143 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,85,240ಕ್ಕೆ ಏರಿಕೆಯಾಗಿದೆ.