ಮನೆ ಕಾನೂನು ಪತ್ನಿ ಅಕ್ರಮ ಸಂಬಂಧ ಹೊಂದಿದ್ದರೆ ಡೈವೋರ್ಸ್ ಬಳಿಕ ಪತಿಯಿಂದ ಜೀವನಾಂಶ ಕೇಳುವಂತಿಲ್ಲ:  ಕರ್ನಾಟಕ ಹೈಕೋರ್ಟ್‌

ಪತ್ನಿ ಅಕ್ರಮ ಸಂಬಂಧ ಹೊಂದಿದ್ದರೆ ಡೈವೋರ್ಸ್ ಬಳಿಕ ಪತಿಯಿಂದ ಜೀವನಾಂಶ ಕೇಳುವಂತಿಲ್ಲ:  ಕರ್ನಾಟಕ ಹೈಕೋರ್ಟ್‌

0

ಚಿಕ್ಕಮಗಳೂರು ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್‌ ಪುನರ್‌ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾ.ರಾಜೇಂದ್ರ ಬಾದಾಮಿಕರ್‌ ಅವರಿದ್ದ ಏಕಸದಸ್ಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ.

Join Our Whatsapp Group

ನ್ಯಾಯ ಪೀಠ, ” ಅರ್ಜಿದಾರರ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಹಾಗೂ ಪ್ರಾಮಾಣಿಕರಿಲ್ಲದಿದ್ದಾಗ ಪತಿಯಿಂದ ಜೀವನಾಂಶ ನೀಡಬೇಕೆಂಬ ವಾದ ಒಪ್ಪಿಕೊಳ್ಳಲಾಗುವುದಿಲ್ಲ. ಜತೆಗೆ, ಪತಿ ಕಡೆಯಿಂದ ಯಾವುದೇ ನಿರೀಕ್ಷೆ ಮಾಡಬಾರದು,” ಎಂದು ಆದೇಶಿಸಿದೆ.

ಅರ್ಜಿದಾರರು ಮತ್ತೊಬ್ಬ ವ್ಯಕ್ತಿಯೊಂದಿಗೆ ಓಡಿ ಹೋಗಿರುವ ಸಂಬಂಧ ದೂರು ದಾಖಲಾಗಿದ್ದು, ತನಿಖೆ ವೇಳೆ ಆಪ್ತನೊಂದಿಗೆ ನೆಲೆಸಲು ಇಚ್ಛಿಸುತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಇದೇ ಆಧಾರದಲ್ಲಿ ವಿಚ್ಛೇದನವೂ ಮಂಜೂರಾಗಿದೆ. ಜತೆಗೆ, ಅರ್ಜಿದಾರರನ್ನು ಪಾಟಿ ಸವಾಲಿಗೆ ಒಳಪಡಿಸಿದಾಗ ಜೀವನ ನಡೆಸುವುದಕ್ಕಾಗಿ ಯಾವುದೇ ಆದಾಯದ ಮೂಲಗಳಿಲ್ಲವೆಂದು ತಿಳಿಸಿದ್ದಾರೆ. ಆದರೆ, ಸಾಕ್ಷಿಗಳ ಪ್ರಕಾರ ಮತ್ತೊಬ್ಬ ವ್ಯಕ್ತಿಯೊಂದಿಗೆ ನೆಲೆಸಿದ್ದು, ಅವರೇ ಜೀವನ ನೋಡಿಕೊಳ್ಳುತ್ತಿದ್ದಾರೆ.

ಎಲ್ಲ ಸಂದರ್ಭಗಳಲ್ಲಿಯೂ ಅವನೊಟ್ಟಿಗೆ ಇರುತ್ತಿರುವ ಅಂಶ ಸಾಕ್ಷ್ಯಾಧಾರಗಳಿಂದ ತಿಳಿದು ಬಂದಿದೆ. ಆದ ಕಾರಣ ಅರ್ಜಿದಾರರಿಗೆ ಪರಿಹಾರ ನೀಡಲಾಗದು,” ಎಂದು ಪೀಠ ತಿಳಿಸಿದೆ.

ಜೀವನ ನಿರ್ವಹಣೆಗೆ ಸಾಕಾಗುವಷ್ಟು ವೇತನ ಹೊಂದಿದ ಮಹಿಳೆಗೆ ಪತಿಯಿಂದ ಜೀವನಾಂಶ ಪಡೆಯುವ ಅಗತ್ಯವಿಲ್ಲ ಎಂದು ಕೆಲ ವರ್ಷಗಳ ಹಿಂದೆ ಕೋಲ್ಕತಾ ಹೈ ಕೋರ್ಟ್ ಪ್ರಕರಣವೊಂದರಲ್ಲಿ ತೀರ್ಪು ನೀಡಿತ್ತು. ವಿಚ್ಛೇದನ ಕೋರಿ ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಪತಿಯಿಂದ ಜೀವನ ನಿರ್ವಹಣೆಗೆ ಜೀವನಾಂಶವನ್ನು ಕೋರಿ ಪತಿಯ ಸಂಪಾದನೆ ಮಾಹಿತಿ ನೀಡಿದ್ದರು. ಅಲ್ಲದೇ ಇದೇ ವೇಳೆ ತಮ್ಮ ವೇತನ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಿದ್ದರು.